ಪುತ್ತೂರು: ಹಿಂದೂ ಜಾಗರಣ ವೇದಿಕೆ ಮಾ.21 ರಂದು ಆಯೋಜಿಸಿದ್ದ ಪ್ರತಿಭಟನೆಯನ್ನು ಮುಂದೂಡಲಾಗಿದೆ ಎಂದು ತಿಳಿದು ಬಂದಿದೆ.
ಹಿಂದೂ ಜಾಗರಣ ವೇದಿಕೆಯ ಹಿರಿಯರು, ಸಂಸದರು ಅನ್ಯಾಯಕ್ಕೆ ಒಳಗಾದವರಿಗೆ ನ್ಯಾಯ ಒದಗಿಸುವ ಭರವಸೆ ನೀಡಿದ ಕಾರಣ ಹತ್ತು ದಿನಗಳ ಗಡುವು ನೀಡಿ ಪ್ರತಿಭಟನೆಯನ್ನು ಮುಂದೂಡಲಾಗಿದೆ ಎಂದು ಹಿಂದೂ ಜಾಗರಣ ವೇದಿಕೆ ಪ್ರಕಟಣೆಯಲ್ಲಿ ತಿಳಿಸಿದೆ.
ಹಿಂದೂ ಕಾರ್ಯಕರ್ತರ ವಿರುದ್ಧ ನಿರಂತರ ಸುಳ್ಳು ಕೇಸ್ ದಾಖಲಿಸಿ ದೌರ್ಜನ್ಯ ಎಸಗುತ್ತಿರುವ ಆರೋಪದಲ್ಲಿ ಪುತ್ತೂರು ಡಿವೈಎಸ್ಪಿ ಗಾನ ಕುಮಾರಿ ವಿರುದ್ಧ ಬೃಹತ್ ಹೋರಾಟಕ್ಕೆ ಹಿಂದೂ ಜಾಗರಣ ವೇದಿಕೆ ಕರೆ ನೀಡಿದ್ದು, ಮಾ. 21 ರಂದು ಡಿವೈಎಸ್ಪಿ ಕಛೇರಿಗೆ ಮುತ್ತಿಗೆ ಹಾಕಲು ತೀರ್ಮಾನಿಸಿತ್ತು.