ವಿಟ್ಲ: ಕ್ರಿಕೆಟ್ ಆಟದ ವಿಚಾರವಾಗಿ ವ್ಯಕ್ತಿಯೊಬ್ಬ ಅಪ್ರಾಪ್ತ ಬಾಲಕನಿಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಕೊಳ್ನಾಡು ಗ್ರಾಮದಲ್ಲಿ ನಡೆದಿದೆ.
ಗಾಯಗೊಂಡ ಬಾಲಕನನ್ನು ಕೊಳ್ನಾಡು ಗ್ರಾಮದ ಕುಲ್ಯಾರು ನಿವಾಸಿ ಅಬ್ದುಲ್ ರಹಿಮಾನ್ ಪುತ್ರ ಶಫೀಕ್(17) ಎನ್ನಲಾಗಿದೆ.
ಬಾಲಕನ ಮೇಲೆ ಅದೇ ಊರಿನ ಅಬ್ದುಲ್ ಖಾದರ್ ಎಂಬವರ ಪುತ್ರ ಕಬೀರ್ ಕ್ಷುಲ್ಲಕ ವಿಚಾರವಾಗಿ ಮಾರಣಾಂತಿಕ ಹಲ್ಲೆ ನಡೆಸಿದ್ದು, ಗಾಯಾಳುವನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಾಯಾಳು ಶಫೀಕ್ ನ ತಂದೆ ವಿಟ್ಲ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.