ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುದನಾಳದಲ್ಲಿ ಬಚ್ಚಿಟ್ಟು 36 ಲಕ್ಷ ರೂ ಮೌಲ್ಯದ ಚಿನ್ನಾಭರಣವನ್ನು ಅಕ್ರಮ ವಾಗಿ ಸಾಗಿಸುತ್ತಿದ್ದ ಪ್ರಯಾಣಿಕನನ್ನು ಅಧಿಕಾರಿಗಳು ಬಂಧಿಸಿದ್ದಾರೆ.
ದುಬೈನಿಂದ ಆಗಮಿಸಿದ ಪ್ರಯಾಣಿಕ ತನ್ನ ಗುದನಾಳದಲ್ಲಿ ಚಿನ್ನವನ್ನು ಬಚ್ಚಿಟ್ಟು ಪೇಸ್ಟ್ ರೂಪದಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ. 24 ಕ್ಯಾರೆಟ್ ನ 706 ಗ್ರಾಂ ಚಿನ್ನ ಪತ್ತೆಯಾಗಿದೆ. ವಶಪಡಿಸಿಕೊಂಡ ಚಿನ್ನದ ಮೌಲ್ಯ 36,53,550 ರೂ. ಎಂದು ತಿಳಿದು ಬಂದಿದೆ.