ಉಪ್ಪಿನಂಗಡಿ: ಅಶೋಕ್ ಕುಮಾರ್ ರೈ ಕೆ. ಎಸ್., ರೈ ಎಸ್ಟೇಟ್ ಕೋಡಿಂಬಾಡಿ ರವರ ಸಾರಥ್ಯದಲ್ಲಿ ನಡೆಯಲಿರುವ 36ನೇ ವರ್ಷದ ‘ವಿಜಯ-ವಿಕ್ರಮ’ ಜೋಡುಕರೆ ಬಯಲು ಕಂಬಳದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ವೀರೇಂದ್ರ ಹೆಗ್ಗಡೆಯವರಿಗೆ ನೀಡಿ ಕಂಬಳಕ್ಕೆ ಆಮಂತ್ರಿಸಲಾಯಿತು.
ಈ ಸಂದರ್ಭದಲ್ಲಿ ಕಂಬಳ ಸಮಿತಿ ಗೌರವಾಧ್ಯಕ್ಷರಾದ ಉಮೇಶ್ ಶೆಣೈ, ಕಾರ್ಯಾಧ್ಯಕ್ಷರಾದ ಅಶೋಕ್ ಕುಮಾರ್ ರೈ ಅರ್ಪಿಣಿಗುತ್ತು, ಪ್ರಧಾನ ಕಾರ್ಯಾದರ್ಶಿಗಳಾದ ಕೇಶವ ಭಂಡಾರಿ ಬೆಳ್ಳಿಪ್ಪಾಡಿ ಕೈಪ, ಕೋಶಾಧಿಕಾರಿಗಳಾದ ಸೀತಾರಾಮ ಶೆಟ್ಟಿ ಹೆಗ್ಡೆಹಿತ್ಲು, ಉಪಾಧ್ಯಕ್ಷರಾದ ವಾರಿಸೇನ ಜೈನ್ ಕೋಡಿಯಾಡಿ, ಸಹ ಸಂಚಾಲಕರಾದ ಜಯಪ್ರಕಾಶ್ ಬದಿನಾರು,ಶಿವರಾಮ ಶೆಟ್ಟಿ ಗೋಳ್ತಮಜಲು ಹಾಗೂ ಇತರರು ಉಪಸ್ಥಿತರಿದ್ದರು.
ಇದೇ ಏ.2 ರಂದು ನೇತ್ರಾವತಿ ನದಿ ಕಿನಾರೆಯ ಕೂಟೇಲು(ಹಳೆಗೇಟು) ಶ್ರೀ ಕ್ಷೇತ್ರ ಧರ್ಮಸ್ಥಳದ ಜಾಗದಲ್ಲಿ ಕಂಬಳ ನಡೆಯಲಿದೆ.




























