ನವದೆಹಲಿ: ಭಾರತದಲ್ಲಿ ನಾಲ್ಕೂವರೆ ತಿಂಗಳ ಬಳಿಕ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಲಾಗಿದೆ. ಪೆಟ್ರೋಲ್, ಡೀಸೆಲ್ ಬೆಲೆ ಲೀಟರ್ ಗೆ 80 ಪೈಸೆ ಹೆಚ್ಚಳ ಮಾಡಲಾಗಿದೆ.
ನಾಲ್ಕೂವರೆ ತಿಂಗಳ ಬಳಿಕ ತೈಲ ಬೆಲೆ ಏರಿಕೆ ಆಗಿದೆ. ಅದರಂತೆ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ 96.21 ರೂಪಾಯಿ, ಡೀಸೆಲ್ ಲೀಟರ್ಗೆ 87.47 ರೂಪಾಯಿ, ಚೆನ್ನೈನಲ್ಲಿ ಪೆಟ್ರೋಲ್ ಲೀಟರ್ಗೆ 102.16 ರೂಪಾಯಿ, ಡೀಸೆಲ್ ಲೀಟರ್ಗೆ 92.19 ರೂಪಾಯಿ, ಮುಂಬೈನಲ್ಲಿ ಲೀಟರ್ಗೆ ಪೆಟ್ರೋಲ್ ಬೆಲೆ 110.82 ರೂಪಾಯಿ ಲೀಟರ್ ಡೀಸೆಲ್ ಬೆಲೆ 95.00 ರೂಪಾಯಿ, ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 105.51 ರೂಪಾಯಿ ಮತ್ತು ಡೀಸೆಲ್ ಬೆಲೆ ಲೀಟರ್ಗೆ 90.62 ರೂಪಾಯಿ ಆಗಿದೆ. ಮಾರ್ಚ್ 10 ರಿಂದಲೇ ಬೆಲೆ ಏರಿಕೆ ಆಗುವ ನಿರೀಕ್ಷೆ ಇತ್ತು. ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಏರಿಕೆ ಹಿನ್ನಲೆ ಈಗ ಭಾರತದಲ್ಲೂ ತೈಲ ಬೆಲೆ ಏರಿಕೆ ಆರಂಭವಾಗಿದೆ.
ಸೋಮವಾರ ದೊಡ್ಡ ಪ್ರಮಾಣದಲ್ಲಿ ಡೀಸೆಲ್ ಖರೀದಿ ಮಾಡುವವರಿಗೆ ಜಾಗತಿಕ ತೈಲ ದರ ಏರಿಕೆ ಆಗಿತ್ತು. ಭಾರತದಲ್ಲಿ ಡೀಸೆಲ್ ಸಗಟು ಖರೀದಿ ದರ ಲೀಟರ್ಗೆ 25 ರೂಪಾಯಿ ಹೆಚ್ಚಿಸಲಾಗಿತ್ತು. ಅಂತಾರಾಷ್ಟ್ರೀಯ ತೈಲ ದರವು ಶೇಕಡಾ 40 ರಷ್ಟು ಹೆಚ್ಚಳವಾಗಿತ್ತು. ದೊಡ್ಡ ಪ್ರಮಾಣದಲ್ಲಿ ಡೀಸೆಲ್ ಖರೀದಿ ಮಾಡುವವರಿಗೆ ಇದು ಅನ್ವಯವಾಗಿತ್ತು. ಇಂದು (ಮಾರ್ಚ್ 22, ಮಂಗಳವಾರ) ಕೂಡ ಇಂಧನ ದರದಲ್ಲಿ(Fuel Rate) 80 ಪೈಸೆ ಏರಿಕೆಯಾಗಿದೆ.
ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ:
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.