ಮಂಗಳೂರು: ಇತ್ತೀಚೆಗೆ ನಗರದ ನಂದಿಗುಡ್ಡೆಯ ಫ್ಲಾಟ್‌ವೊಂದರಲ್ಲಿ ನಡೆಯುತ್ತಿದ್ದ ಅಪ್ರಾಪ್ತ ವಯಸ್ಕರ ಹಾಗೂ ಮಹಿಳೆ ಮತ್ತು ಯುವತಿಯರ ಮಾನವ ಕಳ್ಳ ಸಾಗಾಣಿಕೆ, ವೇಶ್ಯಾವಾಟಿಕೆ ಪ್ರಕರಣಗಳಿಗೆ ಸಂಬಂಧಪಟ್ಟಂತೆ ಇನ್ನೋರ್ವ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಅಬ್ದುಲ್ ರಾಝೀಕ್ ಉಳ್ಳಾಲ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಇನ್ನೋರ್ವ ಆರೋಪಿ. ಈತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನದಲ್ಲಿಡಲಾಗಿದೆ.
ಈ ಹಿನ್ನೆಲೆ ಮಂಗಳೂರು ಸಿಸಿಬಿ ಪೊಲೀಸರು ಈಗಾಗಲೇ ತನಿಖೆಯನ್ನು ಕೈಗೊಂಡಿದ್ದು, ಇಬ್ಬರು ಅಪ್ರಾಪ್ತ ಬಾಲಕಿಯರು ನೀಡಿದ ದೂರಿನಂತೆ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಒಟ್ಟು 10 ಪ್ರಕರಣಗಳು ದಾಖಲಾಗಿರುತ್ತದೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಇನ್ನೂ ಒಟ್ಟು 16 ಮಂದಿ ಆರೋಪಿಗಳನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆರೋಪಿಗಳೆಲ್ಲರೂ ನ್ಯಾಯಾಂಗ ಬಂಧನದಲ್ಲಿದ್ದಾರೆ ಎಂದು ತಿಳಿದು ಬಂದಿದೆ.