ಬಂಟ್ವಾಳ: ಉರುಳಿಗೆ ಬಿದ್ದು ಜೀವನ್ಮರಣ ಹೋರಾಟದಲ್ಲಿದ್ದ ಚಿರತೆಯೊಂದನ್ನು ಅರಣ್ಯ ಇಲಾಖೆಯ ಅಧಿಕಾರಿ ರಾಜೇಶ್ ನೇತೃತ್ವದಲ್ಲಿ ಸ್ಥಳೀಯರ ಸಹಕಾರದೊಂದಿಗೆ ಅರಣ್ಯ ಇಲಾಖೆಯವರು ರಕ್ಷಿಸಿ ಪಿಲಿಕುಳ ನಿಸರ್ಗಧಾಮಕ್ಕೆ ಹಸ್ತಾಂತರ ಮಾಡಿದ್ದಾರೆ.
ಬಂಟ್ವಾಳದ ಅಲ್ಲಿಪಾದೆ ಸಮೀಪದ ದೇವಶ್ಯಪಡೂರು ಗ್ರಾಮದ ಬೀಜಪ್ಪಾಡಿ ಎಂಬಲ್ಲಿ ಕಾಡಿನಲ್ಲಿ ಯಾರೋ ಇಟ್ಟಿದ್ದ ಉರುಳಿಗೆ ಸುಮಾರು 6 ವರ್ಷ ಪ್ರಾಯದ ಗಂಡು ಚಿರತೆಯೊಂದು ಉರುಳಿಗೆ ಬಿದ್ದಿರುವುದನ್ನು ಸ್ಥಳೀಯರು ಗಮನಿಸಿ ಅರಣ್ಯ ಇಲಾಖೆಯವರ ಗಮನಕ್ಕೆ ತಂದಿದ್ದರು.
ಕೂಡಲೇ ಸ್ಥಳಕ್ಕೆ ಧಾವಿಸಿದ ವಲಯ ಅರಣ್ಯಾಧಿಕಾರಿ ರಾಜೇಶ್ ಬಳಿಗಾರ್ ನೇತೃತ್ವದಲ್ಲಿ ರಾತ್ರಿ ಸುಮಾರು 9 ಗಂಟೆಯಿಂದ ಮುಂಜಾನೆ 4 ಗಂಟೆವರೆಗೆ ಕಾರ್ಯಚರಣೆ ನಡೆಸಿ ಚಿರತೆಯನ್ನು ರಕ್ಷಣೆ ಮಾಡಿದ್ಧಾರೆ. ಸದ್ಯ ಚಿರತೆ ಆರೋಗ್ಯವಾಗಿದ್ದು, ಪಿಲಿಕುಳ ನಿಸರ್ಗಧಾಮಕ್ಕೆ ಹಸ್ತಾಂತರ ಮಾಡಲಾಗಿದೆ.