ಹಾಸನ: ಸಾರಿಗೆ ಬಸ್ ಮತ್ತು ಆಲ್ಟೋ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಬೇಲೂರು ತಾಲೂಕಿನ ಸಂಕೇನಹಳ್ಳಿ ಬಳಿ ನಡೆದಿದೆ.
ದುರ್ಘಟನೆಯಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ. ಡಿಕ್ಕಿಯಾದ ರಭಸಕ್ಕೆ ಕಾರಿನಲ್ಲಿ ಮೃತದೇಹಗಳು ಸಿಲುಕಿಕೊಂಡಿದ್ದು, ಮೃತರೆಲ್ಲಾ ಬೇಲೂರಿನ ವಿದ್ಯಾವಿಕಾಸ್ ಶಾಲೆಯ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಬೇಲೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.