ಬೆಂಗಳೂರು: ಮಾರ್ಚ್ 28 ರಿಂದ ಎಪ್ರಿಲ್ 11ರವರೆಗೆ ರಾಜ್ಯಾದ್ಯಂತ ಎಸ್ಎಸ್ಎಲ್ ಸಿ ಪರೀಕ್ಷೆ ಆರಂಭವಾಗಲಿದೆ. ಈ ಬಾರಿ 8 ಲಕ್ಷದ 73 ಸಾವಿರದ 846 ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲಿದ್ದಾರೆ.
ಈ ಬಾರಿ ರಾಜ್ಯದ 15,387 ಶಾಲೆಗಳ 8 ಲಕ್ಷದ 73 ಸಾವಿರದ 846 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದು, ಪರೀಕ್ಷೆ ಬರೆಯಲು 45,289 ಪರೀಕ್ಷಾ ಕೊಠಡಿಗಳ ಸಿದ್ಧತೆ ಮಾಡಲಾಗಿದೆ. ದ.ಕ ಜಿಲ್ಲೆಯಲ್ಲಿ ಒಟ್ಟು 99 ಪರೀಕ್ಷಾ ಕೇಂದ್ರಗಳಲ್ಲಿ 29,712 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಾಯಿಸಿಕೊಂಡಿದ್ದಾರೆ.
ಬಂಟ್ವಾಳದಲ್ಲಿ 17 ಪರೀಕ್ಷಾ ಕೇಂದ್ರಗಳಿದ್ದು, 96 ಶಾಲೆಗಳ ವಿದ್ಯಾರ್ಥಿಗಳು 292 ಕೊಠಡಿಯಲ್ಲಿ ಪರೀಕ್ಷೆಯನ್ನು ಬರೆಯಲಿದ್ದಾರೆ. ಬೆಳ್ತಂಗಡಿಯಲ್ಲಿ 14 ಕೇಂದ್ರಗಳಲ್ಲಿ 205 ಕೊಠಡಿಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದಾರೆ.
ಹಾಗೆಯೇ ಮಂಗಳೂರು ಉತ್ತರದ 20 ಕೇಂದ್ರಗಳ 281 ಕೊಠಡಿಗಳಲ್ಲಿ 98 ಶಾಲಾ ವಿದ್ಯಾರ್ಥಿಗಳು ಪರೀಕ್ಷೆಗಳನ್ನು ಬರೆಯಲಿದ್ದಾರೆ.
ಒಟ್ಟಾರೆಯಾಗಿ 3,444 ಮುಖ್ಯ ಅಧೀಕ್ಷಕರ ನೇತೃತ್ವದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ನಡೆಯಲಿದ್ದು, 49,817 ಕೊಠಡಿ ಮೇಲ್ವಿಚಾರಕರು ಭಾಗಿಯಾಗಲಿದ್ದಾರೆ.
ರಾಜ್ಯದಲ್ಲಿ ಒಟ್ಟು 8 ಲಕ್ಷದ 73 ಸಾವಿರದ 846 ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳು ಈ ವರ್ಷ ಪರೀಕ್ಷೆ ಬರೆಯಲಿದ್ದು, ಈ ಪೈಕಿ 4 ಲಕ್ಷದ 52 ಸಾವಿರದ 732 ಗಂಡು ಮಕ್ಕಳು, 4 ಲಕ್ಷದ 21 ಸಾವಿರದ 110 ಹೆಣ್ಣು ಮಕ್ಕಳು ಹಾಗೂ 04 ಜನ ತೃತೀಯ ಲಿಂಗಿಗಳು ಈ ಬಾರಿ ಪರೀಕ್ಷೆ ಎದುರಿಸುತ್ತಿದ್ದಾರೆ.
ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ಅಗತ್ಯ ಕ್ರಮಗಳಮನ್ನು ಕೈಗೊಳ್ಳಲಾಗಿದೆ. ಪರೀಕ್ಷಾ ಸಿದ್ಧತೆ ಕುರಿತಂತೆ ಈಗಾಗಲೇ ಪೂರ್ವಭಾವಿ ಸಭೆ ನಡೆಸಲಾಗಿದ್ದು ಅಗತ್ಯ ಕ್ರಮಗಳ ಕುರಿತು ಚರ್ಚೆ ನಡೆದಿದೆ ಎಂದು ಡಿಡಿಪಿಐ ಸುಧಾಕರ್ ತಿಳಿಸಿದ್ದಾರೆ.
ವಿದ್ಯಾರ್ಥಿಗಳು ಸಮವಸ್ತ್ರವನ್ನು ಧರಿಸಿ ಬರುವುದು ಕಡ್ಡಾಯವಾಗಿದೆ. ಒಂದು ವೇಳೆ ವಸ್ತ್ರ ಸಂಹಿತೆಯನ್ನು ಪಾಲಿಸದೇ ಇದ್ದರೇ ಅಂದ್ರೆ ಹಿಜಾಬ್ ಧರಿಸಿಕೊಂಡು ಬಂದ್ರೆ ಪರೀಕ್ಷೆಗೆ ನೋ ಎಂಟ್ರಿ ಎಂಬುದಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಖಡಕ್ ಆದೇಶದಲ್ಲಿ ತಿಳಿಸಿದೆ.