ನವದೆಹಲಿ: ಸತತ ಆರನೇ ದಿನವೂ ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಏರಿಕೆ ಕಂಡಿದೆ.
ಪೆಟ್ರೋಲ್ ದರ ಇಂದು ಲೀಟರ್‌ಗೆ 30 ಪೈಸೆ ಮತ್ತು ಡೀಸೆಲ್ ದರ ಲೀಟರ್‌ಗೆ 35 ಪೈಸೆ ಏರಿಕೆಯಾಗಿದೆ. ಕಳೆದ ಒಂದು ವಾರದಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 4 ರೂಪಾಯಿ, ಡೀಸೆಲ್ ಬೆಲೆ 4.10 ರೂಪಾಯಿಗೆ ಏರಿಕೆ ಕಂಡಿದೆ.
ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಹೆಚ್ಚಿಸಲಾಗಿದ್ದು, ರಾಜ್ಯಗಳ ಸ್ಥಳೀಯ ತೆರಿಗೆಯನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ರಾಜ್ಯದಿಂದ ರಾಜ್ಯಕ್ಕೆ ಬದಲಾಗುತ್ತದೆ.