ಪುತ್ತೂರು: ಬೈಕ್ ಮತ್ತು ಟಿಪ್ಪರ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಗಡಿಪಿಲದಲ್ಲಿ ನಡೆದಿದೆ.
ಶಿವಪ್ರಸಾದ್ ಎಂಬವರು ಚಲಾಯಿಸಿಕೊಂಡು ಪುತ್ತೂರು ಕಡೆಗೆ ಬರುತ್ತಿದ್ದ ಟಿಪ್ಪರ್‌ನ ಹಿಂಬದಿಗೆ ಪುಣಚ ನಿವಾಸಿ ಶ್ರೀನಿಧಿ ಎಂಬವರು ಚಲಾಯಿಸಿಕೊಂಡು ಬರುತ್ತಿದ್ದ ಬೈಕ್ ಡಿಕ್ಕಿಯಾಗಿದೆ.
ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಶ್ರೀನಿಧಿ(29) ರವರು ತೀವ್ರ ಗಾಯಗೊಂಡಿದ್ದು, ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಸಹ ಸವಾರೆಯಾಗಿದ್ದ ಅವರ ಪತ್ನಿ ವಿದ್ಯಾಲಕ್ಷ್ಮೀ(25)ಸಣ್ಣಪುಟ್ಟ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಬಳ್ಪದಿಂದ ಪುಣಚಕ್ಕೆ ಬೈಕ್‌ನಲ್ಲಿ ಬರುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಪುತ್ತೂರು ಸಂಚಾರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.