ವಿರಾಜಪೇಟೆ: ತೋಟವೊಂದರಲ್ಲಿ ಕಾಳು ಮೆಣಸು ಕೊಯ್ಯಲು ಬಂದ ಕಾರ್ಮಿಕನ ಮೇಲೆ ಹುಲಿ ದಾಳಿ ನಡೆಸಿ ಹತ್ಯೆ ಮಾಡಿದ ಘಟನೆ ವಿರಾಜಪೇಟೆ ತಾಲೂಕಿನ ಮೊದಲ ರುದ್ರಗುಪ್ಪೆ ಗ್ರಾಮದಲ್ಲಿ ನಡೆದಿದೆ.
ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬಿಟ್ಟಾಂಗಲ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಂಡಂಗಾಲ ಒಂದನೇ ರುದ್ರಗುಪ್ಪೆ ಕೊಂಗಂಡ ಗಣಪತಿ ಅಯ್ಯಪ್ಪ ಎಂಬವರ ಕಾಫಿ ತೋಟದ ಕಾರ್ಮಿಕ ಗಣೇಶ್ ಪುಟ್ಟು (29) ಹುಲಿ ದಾಳಿಗೆ ಬಲಿಯಾದ ವ್ಯಕ್ತಿ.
ಈ ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಮೂಡಿದ್ದು, ಸಂಬಂಧಿಸಿದ ಇಲಾಖೆಯವರು ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.