ಬಂಟ್ವಾಳ: ಕಟ್ಟಡವೊಂದರ 4 ನೇ ಮಹಡಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವಕನೋರ್ವ ಬಿದ್ದು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಸಾವನ್ನಪ್ಪಿರುವ ಘಟನೆ ಮಂಗಳೂರು ನಗರದ ಪಡೀಲ್ ಬಳಿ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ಅಜಿಲಮೊಗರು ಪುಣ್ಕೆದಡಿ ನಿವಾಸಿ ವಿಜಯ್ ಪುಣ್ಕೆದಡಿ (23)ಮಹಡಿಯಿಂದ ಬಿದ್ದು ಮೃತಪಟ್ಟ ದುರ್ದೈವಿಯಾಗಿದ್ದಾನೆ.
ನಿನ್ನೆ ಬೆಳಗ್ಗೆ ಎಂದಿನಿಂತೆ ಕೆಲಸಕ್ಕೆ ಹೋಗಿದ್ದ ವಿಜಯ್ ಕೆಲಸ ಮಾಡುವ ವೇಳೆ ಆಯತಪ್ಪಿ ಮಹಡಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ, ಆಸ್ಪತ್ರೆಗೆ ಸಾಗಿಸಲಾಯಿತಾದರೂ ವಿಜಯ್ ಅದಾಗಲೇ ಮೃತಪಟ್ಟದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.
ಮೃತ ವಿಜಯ್ ತಂದೆ ,ತಾಯಿ ಅಕ್ಕ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



























