ಉಳ್ಳಾಲ: ನಿಂತಿದ್ದ ಬಸ್ಸಿನಡಿಗೆ ಬೈಕ್ ಬಿದ್ದು ತಂದೆ- ಮಗ ಗಾಯಗೊಂಡ ಘಟನೆ ದೇರಳಕಟ್ಟೆಯಲ್ಲಿ ಮಂಗಳವಾರ ನಡೆದಿದೆ.
ಹೊರಜಿಲ್ಲೆಯಿಂದ ಆಸ್ಪತ್ರೆಗೆ ರೋಗಿಗಳನ್ನು ಕರೆತರುವ ಖಾಸಗಿ ಬಸ್ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ವೇಳೆ ಕುತ್ತಾರು ಕಡೆಯಿಂದ ಕೊಣಾಜೆಯತ್ತ ಬೈಕಿನಲ್ಲಿ ತೆರಳುತ್ತಿದ್ದ ತಂದೆ ಮಗ, ನಿಯಂತ್ರಣ ತಪ್ಪಿ ನಿಂತಿದ್ದ ಬಸ್ಸಿನಡಿಗೆ ಬಿದ್ದಿದ್ದಾರೆ.
ಗಾಯಾಳುಗಳನ್ನು ತಕ್ಷಣ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ನಾಗುರಿ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.