ಪುತ್ತೂರು: ಆಟೋ ರಿಕ್ಷಾವೊಂದರಲ್ಲಿ ಮಹಿಳೆಯನ್ನು ಕರೆದೊಯ್ದು ಮಾನಭಂಗಕ್ಕೆ ಯತ್ನಿಸಿ, ಜೀವ ಬೆದರಿಕೆಯೊಡ್ಡಿದ ಆರೋಪಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವರ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಟಿನೋಪಿನಡ್ಕ ನಿವಾಸಿ ಮಹಮ್ಮದ್ ಸಫ್ವಾನ್ ವಿರುದ್ಧ ಪ್ರಕರಣ ದಾಖಲಾಗಿದೆ.
ಸಫ್ವಾನ್ ಪರಿಚಯದ ಮಹಿಳೆಯೊಬ್ಬರನ್ನು ಮಾತನಾಡಲು ಇದೆ ಎಂದು ಹೇಳಿ ಆಟೋ ರಿಕ್ಷಾದಲ್ಲಿ ಕರೆದೊಯ್ದು ದರ್ಬೆ ಹರ್ಷ ಇಲೆಕ್ಟ್ರಾನಿಕ್ಸ್ ಬಳಿ ತಲುಪುತ್ತಿದ್ದಂತೆ ಮಹಿಳೆಯ ಕುತ್ತಿಗೆ ಹಿಡಿದು ಮಾನಭಂಗಕ್ಕೆ ಯತ್ನಿಸಿ, ಅವಾಚ್ಯ ಶಬ್ದಗಳಿಂದ ಬೈದು, ಜೀವ ಬೆದರಿಕೆಯೊಡ್ಡಿದ್ದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಸೆಕ್ಷನ್ 354, 323, 504, 506ರಂತೆ ಪ್ರಕರಣ ದಾಖಲಾಗಿದೆ.