ಬೆಂಗಳೂರು: ಪ್ರೀತಿ ನಿರಾಕರಿಸಿದಕ್ಕೆ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡು ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.
ಬೆಂಗಳೂರಿನ ರಾಮಮೂರ್ತಿ ನಗರದ ನಿವಾಸಿ 25 ವರ್ಷದ ಅರುಣ್ ಎಂಬ ಯುವಕ ನೇಣಿಗೆ ಶರಣಾಗಿದ್ದಾನೆ.
ಮದುವೆ ಆಗುವಂತೆ ಅರುಣ್ ಯುವತಿಯ ಬೆನ್ನು ಬಿದ್ದಿದ್ದ, ಆದ್ರೆ ಯುವತಿ ವಿವಾಹವಾಗಲು ನಿರಾಕರಿಸಿದ್ದಾಳೆ. ಇದರಿಂದ ಮನನೊಂದು ಮನೆಯಲ್ಲಿಯೇ ಅರುಣ್ ನೇಣಿಗೆ ಶರಣಾಗಿದ್ದಾನೆ.
ರಾಮಮೂರ್ತಿ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.