ಮಂಗಳೂರು : ನಿಲ್ಲಿಸಿದ್ದ ಕಾರೊಂದು ಏಕಾಎಕಿ ಬೆಂಕಿ ಹತ್ತಿಕೊಂಡು ಸುಟ್ಟು ಹೋದ ಘಟನೆ ಮಂಗಳೂರಿನ ಶಕ್ತಿನಗರದಲ್ಲಿ ಸಂಭವಿಸಿದೆ. ನಿನ್ನೆ ರಾತ್ರಿ ಸುಮಾರು 8 ಗಂಟೆ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ.
ಶಕ್ತಿನಗರದ ಪಾರ್ಕ್ ಬಳಿ ನಿಲ್ಲಿಸಲಾಗಿದ್ದ ಕಾರು ಏಕಾಏಕಿ ಹೊತ್ತಿ ಉರಿದಿದೆ.
ಕಾರಿಗೆ ಬೆಂಕಿ ಹತ್ತುವುದನ್ನು ಗಮನಿಸಿದ ಸ್ಥಳಿಯರು ಕೂಡಲೇ ಅಗ್ನಿ ಶಾಮಕ ದಳಕ್ಕೆ ಕಾಲ್ ಮಾಡಿದ್ದು ಸ್ಥಳಕ್ಕೆ ಧಾವಿಸಿ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದರು. ಆದರೇ ಅದಾಗಲೇ ಕಾರು ಸಂಪೂರ್ಣ ಸುಟ್ಟು ಹೋಗಿತ್ತು, ಘಟನೆಗೆ ಕಾರಣ ತಿಳಿದು ಬಂದಿಲ್ಲ.