ಮಂಗಳೂರು: ವಿವಿಯ ಸ್ನಾತಕೋತ್ತರ ವಿದ್ಯಾರ್ಥಿ ಪರಿಷತ್ತು ಉದ್ಘಾಟನಾ ಸಮಾರಂಭಕ್ಕೆ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಅತಿಥಿಯಾಗಿ ಆಗಮಿಸುವುದನ್ನು ವಿರೋಧಿಸಿ ಕ್ಯಾಂಪಸ್ ಫ್ರಂಟ್ ಇಂದು ವಿವಿಯ ಮುಖ್ಯ ದ್ವಾರದ ಬಳಿ ಪ್ರತಿಭಟನೆ ನಡೆಸಿದೆ.
ಬುರ್ಖಾ ಧರಿಸಿ ಪ್ರತಿಭಟನೆಯಲ್ಲಿ ವಿದ್ಯಾರ್ಥಿನಿಯರು ಭಾಗಿ ಆಗಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಪೊಲೀಸರನ್ನು ತಳ್ಳಿಕೊಂಡು ಹೋಗಲು ವಿದ್ಯಾರ್ಥಿಗಳು ಯತ್ನಿಸಿದ್ದಾರೆ. ಈ ವೇಳೆ, ಇಬ್ಬರು ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಂಗಳೂರು ವಿವಿ ಸ್ನಾತಕೋತ್ತರ ವಿದ್ಯಾರ್ಥಿ ಪರಿಷತ್ ಉದ್ಘಾಟನೆಗೆ ಪ್ರಭಾಕರ ಭಟ್ ಅತಿಥಿ ಆಗಿ ಆಹ್ವಾನಿಸಲಾಗಿತ್ತು. ಈ ಹಿನ್ನೆಲೆ, ಕಾರ್ಯಕ್ರಮಕ್ಕೆ ಪ್ರಭಾಕರ್ ಭಟ್ ಆಗಮಿಸಿದ್ದಾರೆ.
ಮಂಗಳೂರು ವಿಶ್ವವಿದ್ಯಾಲಯದ ಕಾರ್ಯಕ್ರಮಕ್ಕೆ ಪ್ರಭಾಕರ್ ಭಟ್ ಆಗಮಿಸುತ್ತಾರೆ ಎಂದು ತಿಳಿದು ಈ ಮೊದಲೇ ಅಪಸ್ವರ ಕೇಳಿ ಬಂದಿತ್ತು. ಕಲ್ಲಡ್ಕ ಪ್ರಭಾಕರ್ ಭಟ್ ರವರನ್ನು ವಿಶ್ವವಿದ್ಯಾಲಯಕ್ಕೆ ಕರೆಸುವ ಬಗ್ಗೆ ವಿರೋಧ ವ್ಯಕ್ತವಾಗಿದ್ದವು, ಸದ್ಯ ಕ್ಯಾಂಪಸ್ ಫ್ರಂಟ್ ವಿದ್ಯಾರ್ಥಿ ನಾಯಕರನ್ನು ಬಂಧಿಸಲಾಗಿದೆ.
ಮಂಗಳೂರಿನ ಕೊಣಾಜೆಯಲ್ಲಿ ಇರುವ ವಿಶ್ವವಿದ್ಯಾಲಯದಲ್ಲಿ ಇಂದು (ಮಾರ್ಚ್ 30) ನಡೆಯುತ್ತಿರುವ ಕಾರ್ಯಕ್ರಮಕ್ಕೆ ಪ್ರಭಾಕರ ಭಟ್ ಭಾಗವಹಿಸಲು ಆಗಮಿಸಿದ್ದಾರೆ. ಈ ಹಿನ್ನೆಲೆ ಸಿಎಫ್ಐ ವಿರೋಧ ವ್ಯಕ್ತಪಡಿಸಿದೆ. ವಿವಿ ವಿದ್ಯಾರ್ಥಿ ಪರಿಷತ್ ಉದ್ಘಾಟನೆ ಮತ್ತು ಅತಿಥಿಯಾಗಿ ಪ್ರಭಾಕರ್ ಭಟ್ ಭಾಗಿ ಆಗಿದ್ದಾರೆ. ಮಂಗಳೂರು ವಿಶ್ವವಿದ್ಯಾಲಯ ಕುಲಪತಿ ಪ್ರೊ. ಸುಬ್ರಹ್ಮಣ್ಯ ಯಡಪಡಿತ್ತಾಯ ಕೂಡ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.




























