ಪುತ್ತೂರು: ಏ.2 ರಂದು ಯುಗಾದಿ ಪ್ರಯುಕ್ತ ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ಪಂಚಾಂಗ ಶ್ರವಣ ಕಾರ್ಯಕ್ರಮವು ಪೂರ್ವಾಹ್ನ ಗಂಟೆ 8 ಕ್ಕೆ ವಿನಾಯಕ ಭಟ್ ಗಾಳಿಮನೆ ಅವರಿಂದ ನಡೆಯಲಿದೆ. ಬಳಿಕ ಗಂಟೆ 9 ರಿಂದ ದರ್ಬೆ ವೃತ್ತದಿಂದ ಬೊಳುವಾರು ಓಂ ಶ್ರೀ ಶಕ್ತಿ ಆಂಜನೆಯ ಮಂತ್ರಾಲಯದ ತನಕ ದೇವಳದ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರ ವಿತರಣೆ ಕಾರ್ಯಕ್ರಮ ನಡೆಯಲಿರುವುದು.
ಈ ಕಾರ್ಯಕ್ರಮಕ್ಕೆ ಶಾಸಕರಾದ ಸಂಜೀವ ಮಠಂದೂರು ಹಾಗೂ ನಗರಸಭಾ ಅಧ್ಯಕ್ಷರಾದ ಜೀವಂಧರ್ ಜೈನ್ ರವರು ಚಾಲನೆ ನೀಡಲಿದ್ದಾರೆ.
ಎಲ್ಲಾ ಭಕ್ತವೃಂದದವರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಕೇಶವಪ್ರಸಾದ್ ಮುಳಿಯ ಹಾಗೂ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.