ಪುತ್ತೂರು: ಕರ್ನಾಟಕ ಸರ್ಕಾರದಿಂದ ‘ಸಹಕಾರಿ ರತ್ನ’ ಪ್ರಶಸ್ತಿ ಪಡೆದ ಸವಣೂರು ‘ಸೀತಾರಾಮ ರೈ’ ಅವರಿಗೆ ನಾಗರಿಕ ಸನ್ಮಾನ ಸೀತಾಭಿಮಾನ ಕಾರ್ಯಕ್ರಮ ಎ. 2 ರಂದು ಪುತ್ತೂರಿನ ಬಂಟರ ಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಸಂಸದರಾದ ನಳಿನ್ ಕುಮಾರ್ ಕಟೀಲ್ ರವರು ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಎಸ್.ಸಿ.ಡಿ. ಸಿ. ಸಿ. ಬ್ಯಾಂಕ್ ನ ಅಧ್ಯಕ್ಷರು ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಲದ ಅಧ್ಯಕ್ಷರಾದ ಡಾ. ಎಂ.ಎನ್. ರಾಜೇಂದ್ರ ಕುಮಾರ್ ರವರು ವಹಿಸಲಿದ್ದಾರೆ.
ಮಾಜಿ ಮುಖ್ಯಮಂತ್ರಿಗಳು ಮತ್ತು ಸಂಸದರಾಗಿದ್ದಂತಹ ಡಿ. ವಿ. ಸದಾನಂದ ಗೌಡ ರವರು ಸನ್ಮಾನವನ್ನು ನೆರವೇರಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಸಚಿವರಾದ ಎಸ್. ಅಂಗಾರ, ಪುತ್ತೂರು ಶಾಸಕರಾದ ಸಂಜೀವ ಮಠಂದೂರು, ನಗರಸಭೆ ಅಧ್ಯಕ್ಷರಾದ ಜೀವಂಧರ್ ಜೈನ್, ಮಾಜಿ ಸಚಿವರಾದ ರಮಾನಾಥ ರೈ, ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ, ಆಗಮಿಸಲಿದ್ದಾರೆ. ಪುತ್ತೂರು ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಝೆವಿಯರ್ ಡಿ’ಸೋಜಾ ರವರು ಅಭಿನಂದನಾ ನುಡಿಗಳನ್ನಾಡಲಿದ್ದಾರೆ.