ಬೆಂಗಳೂರು: ಬಜರಂಗದಳದ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪ ಪ್ರಚೋದನಾಕಾರಿ ಹೇಳಿಕೆಯ ಆರೋಪ ಎದುರಿಸುತ್ತಿದ್ದು, ಅವರ ವಿರುದ್ಧ ತನಿಖೆಗೆ ಕೋರ್ಟ್ ಅನುಮತಿ ನೀಡಿದೆ.
ಧಾರ್ಮಿಕ ಭಾವನೆಗಳಿಗೆ ಧಕ್ಕೆ, ಕೋಮು ವೈಷಮ್ಯದ ಹೇಳಿಕೆ ನೀಡಿದ್ದಾರೆಂದು ರಿಯಾಜ್ ಅಹಮ್ಮದ್ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ಸಮ್ಮತಿಸಿದೆ.
ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಡ್ಜ್ ತನಿಖೆಗೆ ಮನವಿ ಸಲ್ಲಿಸಿದ್ದರು. ಅವರ ಅರ್ಜಿ ಆಧಾರದಲ್ಲಿ ಮೇ 5 ರೊಳಗೆ ತನಿಖೆ ನಡೆಸಿ ವರದಿ ಸಲ್ಲಿಸಲು ಶಿವಮೊಗ್ಗದ ದೊಡ್ಡಪೇಟೆ ಪೊಲೀಸರಿಗೆ ಕೋರ್ಟ್ ಸೂಚನೆ ನೀಡಿದೆ.
ಸಚಿವ ಈಶ್ವರಪ್ಪ ರವರಿಗೆ ಸಂಕಷ್ಟ ಎದುರಾಗಿದ್ದು, ಇದೀಗ ಅವರ ವಿರುದ್ಧ ಎಫ್ ಐಆರ್ ದಾಖಲಾಗಿದ್ದು, ತನಿಖೆಯನ್ನು ಎದುರಿಸಬೇಕಾಗಿದೆ.