ಮಂಗಳೂರು: ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ಅಮೈ ಮಹಾಲಿಂಗ ನಾಯ್ಕ ಅವರಿಗೆ ಜಿಲ್ಲಾಡಳಿತದ ವತಿಯಿಂದ ಸನ್ಮಾನ ನಡೆಯಿತು.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರು ಮೈಸೂರು ಪೇಟ ತೊಡಿಸಿ ಹೂಗುಚ್ಛ ನೀಡಿ ಗೌರವಿಸಿದರು.
ಎರಡು ದಿನಗಳ ಹಿಂದೆ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಹಾಲಿಂಗ ನಾಯ್ಕ ಹಲವು ಸಾಧಕರಿಗೆ ರಾಷ್ಟ್ರಪತಿ ಗೌರವಿಸಿದ್ದರು.
ಇದೀಗ ದೆಹಲಿಯಿಂದ ಮಂಗಳೂರಿಗೆ ಆಗಮಿಸಿದ ಪದ್ಮಶ್ರೀ ಪುರಸ್ಕೃತರನ್ನು ಗೌರವಿಸಲಾಗಿದೆ.