ಸುಬ್ರಹ್ಮಣ್ಯ: ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಸುಬ್ರಹ್ಮಣ್ಯದಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಕುಲ್ಕುಂದ ನಿವಾಸಿ ನಿವೃತ್ತ ಅಸಿಸ್ಟೆಂಟ್ ಸಬ್ ಇನ್ಸ್‌ಪೆಕ್ಟರ್ ಎ ಪಿ ಗೌಡ ಎನ್ನಲಾಗಿದೆ.
ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಕಾರು ಡಿಕ್ಕಿ ಹೊಡೆದಿದ್ದು, ಅಪಘಾತದಿಂದಾಗಿ ಎ ಪಿ ಗೌಡ ಸಾವನ್ನಪ್ಪಿದ್ದು, ಮೃತದೇಹವನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.