ಪುತ್ತೂರು: ಆಟೋ ರಿಕ್ಷಾ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ ಘಟನೆ ದರ್ಬೆ ಬೈಪಾಸ್ ರಸ್ತೆಯ ಅಶ್ವಿನಿ ಹೋಟೆಲ್ ಬಳಿ ನಡೆದಿದೆ.
ಆಟೋ ರಿಕ್ಷಾ ಮತ್ತು ಬೊಲೇರೋ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಅಪಘಾತದಿಂದಾಗಿ ಆಟೋ ರಿಕ್ಷಾದಲ್ಲಿದ್ದ ಇಬ್ಬರು ಗಂಭೀರ ಗಾಯಗೊಂಡಿದ್ದು, ಕಾರಿನಲ್ಲಿದ್ದವರಿಗೂ ಗಾಯವಾಗಿದೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಪುತ್ತೂರು ಸಂಚಾರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.