ಬೆಂಗಳೂರು: ರಾಜ್ಯದಲ್ಲಿ ಬೆಲೆ ಏರಿಕೆ (Price Rise) ಬಿಸಿ ಸಾರ್ವಜನಿಕರನ್ನು ತಟ್ಟುತ್ತಲೇ ಇದೆ. ಪೆಟ್ರೋಲ್, ಡೀಸೆಲ್, ಗ್ಯಾಸ್ (Gas) ದರ ಈಗಾಗಲೇ ಗಗನಕ್ಕೇರಿದೆ. ಇದೀಗ ರಾಜ್ಯದ ಜನರಿಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (KERC) ಮತ್ತೊಂದು ಶಾಕ್ ಕೊಟ್ಟಿದೆ. ಪ್ರತಿ ಯೂನಿಟ್ ಗೆ 5 ಪೈಸೆ ಏರಿಕೆ ಮಾಡಿದೆ. ಏಪ್ರಿಲ್ 1 ರಿಂದಲೇ ದರ ಏರಿಕೆ ಜಾರಿ ಮಾಡಿರೋದಾಗಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಅಧ್ಯಕ್ಷ ಮಂಜುನಾಥ್ (Manjunath) ಹೇಳಿದ್ದಾರೆ.
ರಾಜ್ಯದ ವಿದ್ಯುತ್ ಸರಬರಾಜು ಕಂಪನಿಗಳಾದ ಬೆಸ್ಕಾಂ, (BESCOM) ಮೆಸ್ಕಾಂ, ಚೆಸ್ಕಾಂ ಸೇರಿದಂತೆ ಇತರೆ ಕಂಪನಿಗಳು ಪ್ರತಿ ಬಾರಿಯಂತೆ ಈ ವರ್ಷವೂ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿದ್ದವು. ಕಳೆದ ಬಾರಿ 1 ರೂಪಾಯಿ 39 ಪೈಸೆ ಹೆಚ್ಚಳಕ್ಕೆ ಪ್ರಸ್ತಾಪ ಇಡಲಾಗಿತ್ತು, KERC ವಿದ್ಯುತ್ ದರ ಪರಿಷ್ಕರಣೆ ಮಾಡಿದ್ದು ಕೇವಲ 30 ಪೈಸೆ ಮಾತ್ರ, ಈ ಬಾರಿ ಪ್ರತಿ ಯೂನಿಟ್ ಗೆ ಒಂದು ರೂಪಾಯಿ ದರ ಏರಿಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.
ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಗ್ರಾಹಕರ ಕೈ ಸುಡ್ತಿದೆ. ಈ ಬೆನ್ನಲ್ಲೇ ಇದೀಗ ಸಾರ್ವಜನಿಕರಿಗೆ KERC ವಿದ್ಯುತ್ ಶಾಕ್ ನೀಡಿದೆ. ಇಂಧನ ನಿರ್ವಹಣೆ ಸೇರಿದಂತೆ ಹಲವು ಬೇಡಿಕೆಗಳನ್ನ ಮುಂದಿಟ್ಟು ವಿದ್ಯುತ್ ದರ ಪರಿಷ್ಕರಣೆಗೆ ಬೆಸ್ಕಾಂ, ಮೆಸ್ಕಾಂ, ಚೆಸ್ಕಾಂ ಸೇರಿದಂತೆ ಇತರೆ ಕಂಪನಿಗಳು ಪ್ರಸ್ತಾವನೆ ಸಲ್ಲಿಸಿದ್ವು. ಕಳೆದ ಬಾರಿ 1 ರೂಪಾಯಿ 39 ಪೈಸೆ ಹೆಚ್ಚಳಕ್ಕೆ ಪ್ರಸ್ತಾಪ ಇಡಲಾಗಿತ್ತು, KERC ವಿದ್ಯುತ್ ದರ ಪರಿಷ್ಕರಣೆ ಮಾಡಿದ್ದು ಕೇವಲ 30 ಪೈಸೆ ಮಾತ್ರ ಈ ಬಾರಿ ಪ್ರತಿ ಯೂನಿಟ್ ಗೆ ಒಂದು ರೂಪಾಯಿ ದರ ಏರಿಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು ಆದ್ರೆ KERC ಪ್ರತಿ ಯೂನಿಟ್ಗೆ 5 ಪೈಸೆ ದರ ಏರಿಕೆ ಮಾಡಿ ಪ್ರಕಟಣೆ ಹೊರಡಿಸಿದೆ.