ಪುತ್ತೂರು: ಬೊಳುವಾರು ಬೈಪಾಸ್ ರಸ್ತೆಯ ಅಗಲೀಕರಣ ಕಾಮಗಾರಿಯನ್ನು ಎ.5 ರಂದು ಶಾಸಕ ಸಂಜೀವ ಮಠಂದೂರು ರವರು ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ನಗರಸಭೆಯಿಂದ 18 ಲಕ್ಷ ರೂ. ಮತ್ತು ಲೋಕೋಪಯೋಗಿ ಇಲಾಖೆಯಿಂದ 1 ಕೋಟಿ ರೂ. ವೆಚ್ಚದಲ್ಲಿ ಮಂಜಲ್ಪಡ್ಪು ಕಿರಿದಾದ ತಿರುವು ರಸ್ತೆಯನ್ನು ಅಗಲೀಕರಣಗೊಳಿಸಿ ಚತುಷ್ಪತ ರಸ್ತೆ ಮಾಡುವ ಮೂಲಕ ವಾಹನ ಸವಾರರಿಗೆ ಪ್ರಯಾಣ ಮಾಡಲು ಅನುಕೂಲ ಮಾಡಲಾಗುತ್ತಿದೆ.
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವದ ಶುಭ ಸಂದರ್ಭದಲ್ಲಿ ರಸ್ತೆ ಮತ್ತು ಸೇತುವೆ ಲೋಕಾರ್ಪಣೆಯನ್ನು ನಗರಸಭೆ ಮತ್ತು ಲೋಕೋಪಯೋಗಿ ಇಲಾಖೆ ಮಾಡಲಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್, ನಗರಸಭೆ ಸ್ಥಳೀಯ ಸದಸ್ಯ ಸಂತೋಷ್ ಬೊಳುವಾರು, ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಪ್ರಮೋದ್ ಉಪಸ್ಥಿತರಿದ್ದರು.