ಬೆಂಗಳೂರು: ರಾಜ್ಯದ ಕಾಂಗ್ರೆಸ್‌ನ ವಿಧಾನಸಭೆಯಲ್ಲಿ ಮುಸಲ್ಮಾನ ಶಾಸಕರು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರವರನ್ನು ಭೇಟಿ ಮಾಡಿ ‘ಸೋಶಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ'(ಎಸ್.ಡಿ.ಪಿ.ಐ.) ಮತ್ತು ‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ'(ಪಿ.ಎಫ್.ಐ.) ಇವುಗಳನ್ನು ನಿಷೇಧಿಸುವಂತೆ ಮನವಿಯ ಮೂಲಕ ಒತ್ತಾಯಿಸಿದ್ದಾರೆ.
ಹಿಜಾಬ್, ಹಲಾಲ್ ಗಳಂತಹ ಅನೇಕ ಅಂಶಗಳ ಕಾರಣದಿಂದ ಕರ್ನಾಟಕ ರಾಜ್ಯದಲ್ಲಿ ಅಶಾಂತಿಯನ್ನು ನಿರ್ಮಾಣವಾಗಲು ಎಸ್.ಡಿ.ಪಿ.ಐ. ಮತ್ತು ಪಿ.ಎಫ್.ಐ. ಹೊಣೆಗಾರರಾಗಿದ್ದಾರೆ ಎಂದು ಆರೋಪಿಸಿದ್ದು, ಈ ಸಂಘಟನೆಯನ್ನು ನಿಷೇಧಿಸುವಂತೆ ಒತ್ತಾಯಿಸಿದ್ದಾರೆ.




























