ಬೆಂಗಳೂರು: ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರೋ ಘಟನೆ ಮಧ್ಯರಾತ್ರಿ ನಗರದಲ್ಲಿ ನಡೆದಿದೆ.
ಚಂದ್ರು (22) ಕೊಲೆಯಾದ ಯುವಕ.
ತಡರಾತ್ರಿ ಸ್ನೇಹಿತರ ಜತೆ ಊಟಕ್ಕೆ ಬಂದಾಗ ಅಪರಿಚಿತ ಯುವಕರ ಗುಂಪೊಂದು ಈ ಕೃತ್ಯ ಎಸಗಿದ್ದಾರೆ.
ಸ್ನೇಹಿತನ ಹುಟ್ಟುಹಬ್ಬದ ಪ್ರಯುಕ್ತ ಊಟಕ್ಕೆ ಹೊರಟ್ಟಿದ್ದ ಸಮಯದಲ್ಲಿ ಘಟನೆ ನಡೆದಿದೆ. ಈ ವೇಳೆ ಬೈಕ್ ಟಚ್ ವಿಚಾರಕ್ಕೆ ಗಲಾಟೆ ಶುರುವಾಗಿತ್ತು. ಅಪರಿಚಿತರ ಗುಂಪೊಂದು ಚಂದ್ರುಗೆ ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದೆ. ಕೊಲೆ ಮಾಡಿರೋ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಸಿಸಿಟಿವಿಯನ್ನು ಆಧಾರವಾಗಿ ಇಟ್ಟುಕೊಂಡು ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಈ ಪ್ರಕರಣವನ್ನು ಜೆಜೆ ನಗರ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ.