ಶಿವಮೊಗ್ಗ: ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ ಮಾಸುವ ಮುನ್ನವೇ ಮತ್ತೊಮ್ಮೆ ಶಿವಮೊಗ್ಗದಲ್ಲಿ ಜನ ಬೆಚ್ಚಿಬಿದ್ದಿದ್ದಾರೆ. ಅನ್ಯಕೋಮಿನ ಯುವಕರು ಹಿಂದೂ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ನಡೆದಿದೆ.
ಶಿವಮೊಗ್ಗ ನಗರದ ನ್ಯೂ ಮಂಡ್ಲಿ ಬಡಾವಣೆಯಲ್ಲಿ ಮಧು (21) ಎಂಬಾತನ ಮೇಲೆ ಅನ್ಯಕೋಮಿನ 6 ಯುವಕರ ತಂಡ ಹಲ್ಲೆ ನಡೆಸಿದ್ದಾರೆ.
ಹೂವಿನ ವ್ಯಾಪಾರಿಯಾಗಿರುವ ಮಧು, ಮಂಡ್ಲಿ ಬಡಾವಣೆಯಲ್ಲಿ ಹೂವು ವಿತರಣೆಗೆ ಹೋಗಿದ್ದಾನೆ. ಈ ವೇಳೆ ಮಾರಕಾಸ್ತ್ರ ಹಿಡಿದು ಓಡಿಸಿಕೊಂಡು ಬಂದ ಅನ್ಯಕೋಮಿನ ಯುವಕರು ಹಲ್ಲೆ ನಡೆಸಿದ್ದಾರೆ.
ಮೊದಲೇ ಕಿಡ್ನಿ ಆಪರೇಷನ್ ಮಾಡಿಕೊಂಡಿರುವ ಯುವಕ ಮಧುಗೆ, ಅವಾಚ್ಯ ಶಬ್ಧಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಗಾಯಾಳು ಮಧುನನ್ನು ನಗರದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದ್ದು, ಕೂಡಲೇ ದುಷ್ಕರ್ಮಿಗಳನ್ನು ಬಂಧಿಸುವಂತೆ ಹಿಂದೂ ಸಂಘಟನೆಗಳು ಆಗ್ರಹಿಸಿದ್ದಾರೆ.