ಉಪ್ಪಿನಂಗಡಿ: ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಸೇತುವೆಯಿಂದ ನೇತ್ರಾವತಿ ನದಿಗೆ ಧುಮುಕಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಎ.1 ರಂದು ಸಂಜೆ ಉಪ್ಪಿನಂಗಡಿಯಲ್ಲಿ
ನಡೆದಿದೆ.
ಮೂಲತಃ ಗದಗ ಜಿಲ್ಲೆಯ ರೋಣ ನಿವಾಸಿ ಭರಮಪ್ಪ (31) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಭರಮಪ್ಪ ಕೂಲಿ ಕಾರ್ಮಿಕನಾಗಿದ್ದು, ತನ್ನ ಕುಟುಂಬ ಸಮೇತ ತೆಕ್ಕಾರು ಗ್ರಾಮದ ಸರಳಿಕಟ್ಟೆಯ ಮೂಡಡ್ಕ ಎಂಬಲ್ಲಿ ಬಾಡಿಗೆ ಮನೆಯಲ್ಲಿದ್ದುಕೊಂಡು ಸ್ಥಳೀಯ ನಿವಾಸಿಯೋರ್ವರ ತೋಟಕ್ಕೆ ಕೆಲಸಕ್ಕೆ ಹೋಗುತ್ತಿದ್ದ.
ವಿಪರೀತ ಮದ್ಯವ್ಯಸನಿಯಾಗಿದ್ದ. ಕೂಲಿ ಕೆಲಸಕ್ಕೆಂದು ಹೋದವರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತನ ಪತ್ನಿ ಗೀತಾ ಉಪ್ಪಿನಂಗಡಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.