ಪುತ್ತೂರು: ನಿಯಮ ಮೀರಿ ಧ್ವನಿವರ್ಧಕ ಬಳಕೆ ತಡೆಗೆ ಪೊಲೀಸರು ಮುಂದಾಗಿದ್ದಾರೆ.
ಪುತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯ ದೇವಸ್ಥಾನ, ಮಸೀದಿ, ಚರ್ಚ್ ಗಳಿಗೆ ಪೊಲೀಸರು ನೋಟಿಸ್ ನೀಡುತ್ತಿದ್ದಾರೆ.
ಇಂತಿಷ್ಟು ಡೆಸಿಬಲ್ ಗಿಂತ ಮೀರಬಾರದು ಎಂಬ ನಿಯಮವಿದ್ದು, ಅದನ್ನು ಪಾಲಿಸುವಂತೆ ಸೂಚನೆ ನೀಡಿ ನೋಟಿಸ್ ನೀಡಲಾಗುತ್ತಿದೆ. ನಿಯಮ ಉಲ್ಲಂಘಿಸಿದರೆ ಕಾನೂನಾತ್ಮಕ ಕ್ರಮದ ಎಚ್ಚರಿಕೆ ನೀಡಲಾಗುತ್ತಿದೆ. ಸರಕಾರ ಹಾಗೂ ಕೋರ್ಟ್ ಆದೇಶದ ಪ್ರಕಾರ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.