ಬ್ಯಾಂಕ್ ಆಫ್ ಬರೋಡಾ (Bank of Baroda ) ಅಗ್ರಿಕಲ್ಚರ್ ಮಾರ್ಕೆಟಿಂಗ್ ಅಧಿಕಾರಿಗಳು, ಸಹಾಯಕ ಉಪಾಧ್ಯಕ್ಷ ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಭಾರತದ (All India) ಯಾವುದೇ ಸ್ಥಳದಲ್ಲಿ ಕೆಲಸ ಮಾಡಲು ಸಿದ್ದರಿರಬೇಕು. ಕೆಲಸ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಂಡು ಏಪ್ರಿಲ್ 26ರ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಹುದ್ದೆಗೆ ಸಂಬಂಧಪಟ್ಟ ಸಂಪೂರ್ಣ ಮಾಹಿತಿ ಇಲ್ಲಿದೆ..
- ಹುದ್ದೆಗಳ ಸಂಖ್ಯೆ 26
- ಉದ್ಯೋಗ ಸ್ಥಳ ಭಾರತದಾದ್ಯಂತ
- ಹುದ್ದೆಯ ಹೆಸರು ಕೃಷಿ ಮಾರುಕಟ್ಟೆ ಅಧಿಕಾರಿಗಳು, ಸಹಾಯಕ ಉಪಾಧ್ಯಕ್ಷರು
- ವೇತನ ರೂ.1500000-1800000/- ವರ್ಷಕ್ಕೆ
- ಹುದ್ದೆಯ ವಿವರ ಸಹಾಯಕ ಉಪಾಧ್ಯಕ್ಷ – 06ಕೃಷಿ ಮಾರುಕಟ್ಟೆ ಅಧಿಕಾರಿಗಳು 20
- ಶೈಕ್ಷಣಿಕ ಅರ್ಹತೆ ಸಹಾಯಕ ಉಪಾಧ್ಯಕ್ಷ: ಪದವಿ, ಸ್ನಾತಕೋತ್ತರ ಪದವಿ, ಸಿಎಕೃಷಿ ಮಾರುಕಟ್ಟೆ ಅಧಿಕಾರಿಗಳು: ಪದವಿ, ಸ್ನಾತಕೋತ್ತರ ಪದವಿ, MBA
- ವಯೋಮಿತಿ ಸಹಾಯಕ ಉಪಾಧ್ಯಕ್ಷ 26-40ಕೃಷಿ ಮಾರುಕಟ್ಟೆ ಅಧಿಕಾರಿಗಳು 25-40
- ಸಹಾಯಕ ಉಪಾಧ್ಯಕ್ಷ ಹುದ್ದೆಗೆ ಅರ್ಜಿ ಹಾಕಿ ಅರ್ಜಿ ಹಾಕಿ
- ಕೃಷಿ ಮಾರುಕಟ್ಟೆ ಅಧಿಕಾರಿ ಹುದ್ದೆಗೆ ಅರ್ಜಿ ಹಾಕಿ ಅರ್ಜಿ ಹಾಕಿ
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 26-04-2022
ಭಾರತದಾದ್ಯಂತ ಖಾಲಿ ಇರುವ 26 ಕೃಷಿ ಮಾರುಕಟ್ಟೆ ಅಧಿಕಾರಿಗಳು, ಸಹಾಯಕ ಉಪಾಧ್ಯಕ್ಷರ ಹುದ್ದೆಗಳ ಭರ್ತಿಗೆ ಬ್ಯಾಂಕ್ ಆಫ್ ಬರೋಡಾ ಅರ್ಜಿ ಆಹ್ವಾನಿಸಿದ್ದು, ಪದವಿ, ಸ್ನಾತಕೋತ್ತರ ಪದವಿ, ಎಂಬಿಎ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ವರ್ಷಕ್ಕೆ ರೂ.1500000-1800000/- ವೇತನ ನೀಡಲಾಗುತ್ತದೆ. ಇನ್ನು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಏಪ್ರಿಲ್ 26 ಕೊನೆಯ ದಿನವಾಗಿದೆ.
ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 06-04-2022
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26-04-2022