ಮುಂಬೈ: ಕೆಮಿಕಲ್ ಫ್ಯಾಕ್ಟರಿಯಲ್ಲಿ ಭೀಕರ ಬೆಂಕಿ ಅವಘಡ ಸಂಭವಿಸಿದೆ. ಈ ವೇಳೆ ಕೆಲಸ ಮಾಡುತ್ತಿದ್ದ ನಾಲ್ವರು ಸಾವನ್ನಪ್ಪಿದ್ದು, ಹಲವರ ಸ್ಥಿತಿ ಗಂಭೀರವಾಗಿರುವ ಘಟನೆ ಮಹಾರಾಷ್ಟ್ರದ ಘರ್ಡಾ ಕೆಮಿಕಲ್ ಫ್ಯಾಕ್ಟರಿಯಲ್ಲಿ ನಡೆದಿದೆ. ಘಟನೆ ವೇಳೆ ಒಟ್ಟು ಮೂವತ್ತು ಮಂದಿ ಈ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದರು. ಮೇಲ್ನೋಟಕ್ಕೆ ಶಾರ್ಟ್ ಸರ್ಕ್ಯೂಟ್ ನಿಂದ ಅವಘಡ ಸಂಭವಿಸಿರುವುದು ತಿಳಿದುಬಂದಿದೆ.
ಘಟನಾ ಸ್ಥಳದಲ್ಲಿ 10 ಮಂದಿ ಅಗ್ನಿಶಾಮಕ ದಳಗಳ ಸಿಬ್ಬಂದಿಯಿಂದ ಕಾರ್ಯಾಚರಣೆ ನಡೆದಿದೆ. ಐದು ಜನರು ಒಳಗೆ ಸಿಕ್ಕಿಬಿದ್ದರು, ಅಗ್ನಿಶಾಮಕ ಸಿಬ್ಬಂದಿ ಒಬ್ಬರನ್ನು ರಕ್ಷಿಸುವಲ್ಲಿ ಯಶಸ್ವಿಯಾದರು. ಕಾರ್ಯಾಚರಣೆಯಲ್ಲಿ ನಾಲ್ವರ ಸುಟ್ಟ ಶವಗಳು ಪತ್ತೆಯಾಗಿವೆ. ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಗೊಂಡ ಕಾರ್ಮಿಕರನ್ನು ಚಿಕಿತ್ಸೆಗಾಗಿ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಮೃತರ ಶವಗಳನ್ನು ಶವಪರೀಕ್ಷೆ ಕಳುಹಿಸಲಾಗಿದೆ ಎಂದು ಖೇಡ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಘಟನೆಯಲ್ಲಿ ನಾಲ್ವರು ನೌಕರರು ಸ್ಥಳದಲ್ಲೇ ಸಾವನ್ನಪ್ಪಿದರು. ಇತರರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೇಲ್ನೋಟಕ್ಕೆ ಶಾರ್ಟ್ ಸರ್ಕ್ಯೂಟ್ ನಿಂದ ಅವಘಡ ಸಂಭವಿಸಿರುವುದು ತಿಳಿದುಬಂದಿದೆ. ಆದರೆ ಸಂಸ್ಥೆ ಕೂಡ ಈ ಬಗ್ಗೆ ತನಿಖೆ ನಡೆಸುತ್ತಿದೆ. ಸ್ಥಳೀಯ ಠಾಣೆಯಲ್ಲಿ ದೂರು ಕೂಡ ದಾಖಲಾಗಿದೆ.