ವಿಟ್ಲ: ಶಾಸಕರ 10 ಲಕ್ಷ ರೂ. ಅನುದಾನದಲ್ಲಿ ಕಾಂಕ್ರೀಟಿಕರಣಗೊಂಡ ಬಹುವರ್ಷಗಳ ಬೇಡಿಕೆಯಾದ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ಜೋಗಿಮಠ ಅಡ್ಡ ರಸ್ತೆಯನ್ನು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಸಂಜೀವ ಮಠಂದೂರು ರವರು ಉದ್ಘಾಟಿಸಿದರು.
ವಿಟ್ಲವು ಈಗಾಗಲೇ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟೂ ಅನುದಾನಗಳು ಬರಲಿವೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಂಡಲ ಬಿಜೆಪಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಪಟ್ಟಣ ಪಂಚಾಯತ್ ಸದಸ್ಯರಾದ ಅಶೋಕ್ ಕುಮಾರ್ ಶೆಟ್ಟಿ, ಹರೀಶ್ ಸಿಎಚ್, ಕೃಷ್ಣ ಎನ್, ರವಿಪ್ರಕಾಶ್, ವಸಂತ ಕೆ, ಮಾಜಿ ಗ್ರಾಮ ಪಂಚಾಯತ್ ಸದಸ್ಯೆ ಸುಮತಿ ಕೋಟ್ಯಾನ್, ವ್ಯವಸಾಯ ಬ್ಯಾಂಕ್ ನಿರ್ದೇಶಕ ಶಿವಪ್ಪ ನಾಯ್ಕ್, ಸಾಮಾಜಿಕ ಜಾಲತಾಣದ ಕೃಷ್ಣ ಮುದೂರು ಉಪಸ್ಥಿತರಿದ್ದರು.