ಬೆಂಗಳೂರು: 16 ವರ್ಷದ ಬಾಲಕಿ ಮೇಲೆ ಗ್ಯಾಂಗ್ರೇಪ್ ನಡೆದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಬಾಲಕಿ ಮೇಲೆ 8 ಜನರಿಂದ ನಿರಂತರ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ತಿಳಿದು ಬಂದಿದೆ.
ಪ್ರಕರಣದ ಪ್ರಮುಖ ಆರೋಪಿ ಮೊದಲು ವಿಡಿಯೋ ಮಾಡಿ ದೌರ್ಜನ್ಯ ನಡೆಸಿದ್ದ. ನಂತರ, ಈ ವಿಚಾರ ತಿಳಿಸಿದ್ರೆ ಕೊಲೆ ಮಾಡುವುದಾಗಿ ಬಾಲಕಿಗೆ ಬೆದರಿಕೆ ಹಾಕಿದ್ದ. ಬಳಿಕ ವಿಡಿಯೋ ತೋರಿಸಿ ಸ್ನೇಹಿತರ ಜೊತೆ ಗ್ಯಾಂಗ್ರೇಪ್ ಮಾಡಿದ್ದ ಎಂದು ತಿಳಿದುಬಂದಿದೆ.
ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಈ ವಿಷಯ ತಿಳಿದು ಪೋಷಕರು ಠಾಣೆಗೆ ದೂರು ನೀಡಿದ್ದಾರೆ. ಪೋಷಕರ ದೂರಿನನ್ವಯ ಪೊಲೀಸರು 7 ಜನರನ್ನ ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿಗಾಗಿ ಪೊಲೀಸರಿಂದ ಶೋಧಕಾರ್ಯ ಭರದಿಂದ ಸಾಗಿದೆ.