ಸುಳ್ಯ: ಹಿಂದೂ ಜಾಗರಣ ವೇದಿಕೆ ಸುಳ್ಯ ತಾಲೂಕು ವತಿಯಿಂದ ರಕ್ಷಿತಾರಣ್ಯದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿರುವ ಮಸೀದಿ ತೆರವುಗೊಳಿಸಬೇಕು ಹಾಗೂ ವಲಯ ಅರಣ್ಯದ ಅತಿಕ್ರಮಣಕ್ಕೆ ಸಹಕರಿಸಿದ ಅಧಿಕಾರಿಗಳ ವಿರುದ್ಧ ಎ.11 ರಂದು ಸುಳ್ಯ ವಲಯಾರಣ್ಯಾ ಕಚೇರಿಗೆ ಮುತ್ತಿಗೆ ಮತ್ತು ಬೃಹತ್ ಪ್ರತಿಭಟನಾ ಸಭೆ ನಡೆಯಲಿದ್ದು, ಈ ಹಿನ್ನೆಲೆ ಕಾರ್ಯಕ್ರಮದ ಯಶಸ್ಸಿಗಾಗಿ ಸುಳ್ಯ ಚೆನ್ನಕೇಶವ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಹಿಂದೂ ಜಾಗರಣ ವೇದಿಕೆ ಮತ್ತು ವಿಶ್ವ ಹಿಂದೂ ಪರಿಷದ್ ಬಜರಂಗದಳ ಪ್ರಮುಖರು ಉಪಸ್ಥಿತರಿದ್ದರು.