ಸಂಪ್ಯ: ಬಿಜೆಪಿ ಕಾರ್ಯಕರ್ತ ಅಬ್ದುಲ್ ರಜಾಕ್ ಬಡಗನ್ನೂರು ರವರಿಗೆ ಜೀವ ಬೆದರಿಕೆ ಕರೆ ಬಂದಿದ್ದು, ಈ ಬಗ್ಗೆ ಅವರು ಸಂಪ್ಯ ಠಾಣೆಯಲ್ಲಿ ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದ ಬಿಜೆಪಿ ಕಾರ್ಯಕರ್ತ ಅಬ್ದುಲ್ ರಜಾಕ್ ಎಂಬವರಿಗೆ ಅನಾಮಧೇಯ ಫೋನ್ ನಂಬರ್ ನಿಂದ ಬೆದರಿಕೆ ಕರೆ ಬಂದಿದ್ದು, ‘ನಿನನ್ನು ಜೀವ ಸಹಿತ ಬಿಡುವುದಿಲ್ಲ’ ಎಂದು ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಸಂಪ್ಯ ಠಾಣೆಗೆ ದೂರು ನೀಡಿದ್ದಾರೆ.