ಮಂಗಳೂರು: ಇಬ್ಬರು ಸಹೋದರಿಯರು ಸುರತ್ಕಲ್ ಎನ್‌ಐಟಿಕೆ ಬೀಚ್‌ನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೃತರನ್ನು ಮಂಗಳೂರು ಮೂಲದ ತೃಷಾ(17), ವೈಷ್ಣವಿ(18) ಎನ್ನಲಾಗಿದೆ.
ಮೃತರು ನಗರ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯೊಬ್ಬರ ಪುತ್ರಿಯರು ಎನ್ನಲಾಗಿದೆ.
ಸಮುದ್ರ ಪಾಲಾಗಿದ್ದ ಮೃತದೇಹಗಳನ್ನು ಹೊರತೆಗೆಯಲು ಪೊಲೀಸರು ಮತ್ತು ಮುಳುಗುಗಾರರು ಸ್ಥಳಕ್ಕೆ ಆಗಮಿಸಿದ್ದರು.