ಸುಬ್ರಹ್ಮಣ್ಯ: ಮುಂದಿನ ಗುರುವಾರ ಬಿಡುಗಡೆಯಾಗಲಿರುವ ಬಹು ನಿರೀಕ್ಷಿತ ಕೆಜಿಎಫ್-2 ಚಿತ್ರತಂಡದ ಜೊತೆ ರಾಕಿಂಗ್ ಸ್ಟಾರ್ ಯಶ್ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಇಂದು ಭೇಟಿ ನೀಡಿದರು.
ದೇವಳಕ್ಕೆ ಭೇಟಿ ನೀಡಿದ ವೇಳೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಚಿತ್ರತಂಡಕ್ಕೆ ಸ್ವಾಗತಿಸಿದರು. ಯಶ್ ಹಾಗೂ ಸಂಗಡಿಗರು ಕ್ಷೇತ್ರದಲ್ಲಿ ಶ್ರೀ ದೇವರ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು.
ಇದೇ ವೇಳೆ ನೆಚ್ಚಿನ ನಟನ ಪೋಟೊ ತೆಗೆಯಲು ಅಭಿಮಾನಿಗಳು ಮುಗಿಬಿದ್ದರು.