ಕಡಬ: ವ್ಯಕ್ತಿಯೋರ್ವರ ಮೃತದೇಹ ನೀರಿನ ಟ್ಯಾಂಕಿಯಲ್ಲಿ ಪತ್ತೆಯಾದ ಘಟನೆ ಕಡಬ ತಾಲೂಕಿನ ಸವಣೂರಿನ ಬರೆಪ್ಪಾಡಿಯಲ್ಲಿ ನಡೆದಿದೆ.
ಮೃತರನ್ನು ಬರೆಪ್ಪಾಡಿ ದಾಮೋದರ ಗೌಡ (55) ಎನ್ನಲಾಗಿದೆ.
ದಾಮೋದರ ಗೌಡರ ಮೃತದೇಹ ಮನೆಯ ಹತ್ತಿರದ ನೀರಿನ ಟ್ಯಾಂಕ್‌ನಲ್ಲಿ ಪತ್ತೆಯಾಗಿದ್ದು, ಬೆಳ್ಳಾರೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮೃತರು ಪತ್ನಿ ಹಾಗೂ ಓರ್ವ ಪುತ್ರ, ಪುತ್ರಿಯನ್ನು ಅಗಲಿದ್ದಾರೆ.