ಪುತ್ತೂರು: ವಿದ್ಯಾರ್ಥಿಗಳ ಮೇಲೆ ವಿನಾ ಕಾರಣ ಕೇಸು ದಾಖಲಿಸಿ,ರೌಡಿ ಶೀಟರ್ ದಾಖಲೆ ಮಾಡಿದ್ದನ್ನು ರದ್ದು ಮಾಡಿ, ಡಿವೈಎಸ್ಪಿ ಡಾ.ಗಾನ ಪಿ ಕುಮಾರ್ ಅವರನ್ನು ವರ್ಗಾಹಿಸಬೇಕೆಂದು ಆಗ್ರಹಿಸಿ ಪುತ್ತೂರಿನ ಹಿಂದೂ ಜಾಗರಣ ವೇದಿಕೆ ಪ್ರಮುಖರು ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಯವರನ್ನು ಭೇಟಿ ಮಾಡಿ ಮನವಿ ಮಾಡಿದರು.
ಬಂಟ್ವಾಳ ತಾಲೂಕಿನ ಬ್ರಹ್ಮರಕೂಟ್ಲುವಿನಲ್ಲಿ ಪಕ್ಷದ ಕಾರ್ಯಕ್ರಮಕ್ಕೆ ಆಗಮಿಸಿದ್ದ ಮುಖ್ಯಮಂತ್ರಿಯವರನ್ನು ಭೇಟಿಯಾದ ಹಿಂದೂ ಜಾಗರಣ ವೇದಿಕೆ ಮುಖಂಡರು ಪುತ್ತೂರಿನಲ್ಲಿ ಡಿ.ವೈ.ಎಸ್. ಪಿ ಯವರು ಹಿಂದೂ ಕಾರ್ಯಕರ್ತರ ಮೇಲೆ ವಿನ್ಹಾ ಕಾರಣ ಕೇಸು ದಾಖಲಿಸಿರುವ ಬಗ್ಗೆ ತಿಳಿಸಿದರು.
ಈ ಸಂದರ್ಭದಲ್ಲಿ ಹಿಂ.ಜಾ.ವೇ. ಪುತ್ತೂರು ತಾಲೂಕು ಗೌರವಾಧ್ಯಕ್ಷ ಡಾ. ಎಂ.ಕೆ.ಪ್ರಸಾದ್, ಶಾಸಕರಾದ ಸಂಜೀವ ಮಠಂದೂರು, ರಾಜೇಶ್ ನಾಯ್ಕ್, ಬಿಜೆಪಿ ಜಿಲ್ಲಾ ಅಧ್ಯಕ್ಷ ಸುದರ್ಶನ್ ಮೂಡಬಿದ್ರೆ, ಸಾಜ ರಾಧಾಕೃಷ್ಣ ಆಳ್ವ, ಹಿಂಜಾವೇ ಪುತ್ತೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಜಿತ್ ಹೊಸಮನೆ, ಕಾರ್ಯದರ್ಶಿ ಪ್ರಶಾಂತ್ ಕೆಂಪುಗುಡ್ಡೆ,ಪುತ್ತೂರು ತಾಲೂಕು ಪ್ರದಾನ ಕಾರ್ಯದರ್ಶಿ ದಿನೇಶ್ ಪಂಜಿಗ ಮತ್ತಿತರರು ಉಪಸ್ಥಿತರಿದ್ದರು.