ಪುತ್ತೂರು: ರೋಟರಿಪುರ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಬೀಳ್ಕೊಡುಗೆ ಕಾರ್ಯಕ್ರಮವು ಎ.13 ರಂದು ನಡೆಯಿತು.
ಕಾರ್ಯಕ್ರಮದಲ್ಲಿ ಬಾಲವಿಕಾಸ ಸಮಿತಿಯ ಅಧ್ಯಕ್ಷರಾದ ಗೀತಾ ಚಂದ್ರಶೇಖರ್, ಅಂಗನವಾಡಿ ಕೇಂದ್ರದ ಮೇಲ್ವಿಚಾರಕಿ ಜಲಜಾಕ್ಷಿ, ಆಶಾ ಕಾರ್ಯಕರ್ತೆ ರಾಧಿಕಾ, ಸ್ತ್ರೀಶಕ್ತಿ ಅಧ್ಯಕ್ಷೆ ರೇಖಾ ಹಾಗೂ ಅಂಗನವಾಡಿ ಶಿಕ್ಷಕಿ ಹಾಗೂ ಸಹಾಯಕಿ ಗೀತಾ ಉಪಸ್ಥಿತರಿದ್ದರು. ಅಂಗನವಾಡಿ ಮಕ್ಕಳು ಹಾಗೂ ತಾಯಂದಿರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
2021-22 ರ ಸಾಲಿನ ಮಕ್ಕಳ ಪೋಷಕರು ಅಂಗನವಾಡಿ ಕೇಂದ್ರಕ್ಕೆ ಪಾತ್ರೆ ಇಡುವ ಸ್ಟೀಲ್ ಸ್ಟಾಂಡ್ ಹಾಗೂ ಫೈಬರ್ ಚೆಯರ್ ಗಳನ್ನು ಕೊಡುಗೆಯಾಗಿ ನೀಡಿದರು. ಕಾವ್ಯ ಸ್ವಾಗತಿಸಿ, ಶಿಕ್ಷಕಿ ಜಯಶ್ರೀ ಧನ್ಯವಾದಗೈದರು.




























