ಸುಳ್ಯ: ಕಾರೊಂದು ಸೇತುವೆ ಡಿವೈಡರ್ ಗೆ ಗುದ್ದಿದ ಪರಿಣಾಮ ಮೂವರು ಗಂಭೀರ ಗಾಯಗೊಂಡ ಘಟನೆ ಸಂಪಾಜೆಯ ಕಲ್ಲು ಗುಂಡಿಯ ಮುಖ್ಯಪೇಟೆಯಲ್ಲಿ ಗುರುವಾರ ರಾತ್ರಿ ನಡೆದಿದೆ.
ಸಂಪಾಜೆಯಿಂದ ಸುಳ್ಯದ ಕಡೆಗೆ ತೆರಳುತ್ತಿದ್ದ ಮಾರುತಿ 800 ಕಾರು ನಿಯಂತ್ರಣ ಕಳೆದುಕೊಂಡು ಸೇತುವೆಗೆ ಅಪ್ಪಳಿಸಿದೆ.
ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜು ಗುಜ್ಜಾಗಿದ್ದು, ಗಾಯಾಳುವನ್ನು ಜ್ಯೋತಿಷಿ ಗುರುರಾಜ್, ಸಂಪಾಜೆಯ ಪ್ರೇಮ್ ಎಂದು ಗುರುತಿಸಲಾಗಿದೆ.
ಸಂಪಾಜೆಯಿಂದ ಜ್ಯೋತಿಷಿಯನ್ನು ಕರೆದುಕೊಂಡು ಪೂಜೆಗೆ ಸವಣೂರು ಕಡೆಗೆ ತೆರಳುತ್ತಿದ್ದರು ಎನ್ನಲಾಗಿದ್ದು, ಘಟನೆಯಲ್ಲಿ ಕಾರಿನಲ್ಲಿದ್ದ ಮೂವರಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.