ದಿಬ್ರುಗಢ ಹಾಗೂ ದೆಹಲಿ ಮಾರ್ಗವಾಗಿ ಪ್ರಯಾಣಿಸುತ್ತಿದ್ದ ಇಂಡಿಗೋ ವಿಮಾನದಲ್ಲಿ ಪ್ರಯಾಣಿಕರೊಬ್ಬರ ಮೊಬೈಲ್ ಫೋನ್‌ನಲ್ಲಿ ಇದ್ದಕ್ಕಿದಂತೆ ಬೆಂಕಿ ಹೊತ್ತಿಕೊಂಡ ಆಘಾತಕಾರಿ ಘಟನೆ ನಡೆದಿದೆ.
ಘಟನೆ ನಡೆಯುತ್ತಿದ್ದಂತೆ ಕಾರ್ಯಪ್ರವೃತ್ತರಾದ ಸಿಬ್ಬಂದಿ ಅಗ್ನಿಶಾಮಕ ಯಂತ್ರವನ್ನು ಬಳಸಿ ಬೆಂಕಿಯನ್ನು ನಂದಿಸಿದ್ದಾರೆ.
ದಿಬ್ರುಗಢದಿಂದ ದೆಹಲಿಗೆ ಬರುತ್ತಿದ್ದ 6E 2037 ವಿಮಾನದಲ್ಲಿ ಈ ಘಟನೆ ಸಂಭವಿಸಿದೆ. ಪ್ರಯಾಣಿಕಕೊಬ್ರ ಫೋನ್‌ನಿಂದ ಹೊಗೆ ಬರುತ್ತಿರುವುದು ಹಾಗೂ ಕಿಡಿಗಳು ಏಳುತ್ತಿರುವುದನ್ನು ಸಿಬ್ಬಂದಿಯೊಬ್ಬರು ಗಮನಿಸಿದ್ದಾರೆ. ತಕ್ಷಣವೇ ಎಚ್ಚರಿಕೆ ಕ್ರಮಗಳನ್ನು ಕೈಗೊಂಡ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
ವಿಮಾನಯಾನ ಸಿಬ್ಬಂದಿಗೆ ಇಂತಹ ಅಪಾಯಕಾರಿ ಘಟನೆಗಳನ್ನು ನಿರ್ವಹಿಸಲು ತರಬೇತಿ ನೀಡಲಾಗಿದೆ. ಮತ್ತು ಅವರು ಪರಿಸ್ಥಿತಿಯನ್ನು ತ್ವರಿತವಾಗಿ ನಿಯಂತ್ರಣಕ್ಕೆ ತಂದಿದ್ದಾರೆ ಯಾವುದೇ ಹಾನಿ ಸಂಭವಿಸಿಲ್ಲ.
ಈ ಘಟನೆಯಲ್ಲಿ ಪ್ರಯಾಣಿಕರಿಗೆ ಹಾಗೂ ಕ್ಯಾಬಿನ್ ಸಿಬ್ಬಂದಿಗೆ ಯಾವುದೇ ತೊಂದರೆಯಾಗಿಲ್ಲ ಎಂದು ಇಂಡಿಗೋ ಸಂಸ್ಥೆ ತಿಳಿಸಿದೆ. ಬಳಿಕ ವಿಮಾನವನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಇಳಿಸಲಾಗಿದೆ ಎಂದು ವಿಮಾನಯಾನ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.