ಬಂಟ್ವಾಳ: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮಾಣಿಯ ಬುಡೋಳಿ ಇಂದು ಮುಂಜಾನೆ ಸರಣಿ ಅಪಘಾತ ಸಂಭವಿಸಿದೆ.
ಇಂದು ಮುಂಜಾನೆ 6 ಗಂಟೆ ಸುಮಾರಿಗೆ ಬೆಂಗಳೂರು ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ಐರಾವತ ವೋಲ್ವೋ ಬಸ್ ಓವರ್ ಟೇಕ್ ಮಾಡುವ ಭರದಲ್ಲಿ ಮುಂಭಾಗದಲ್ಲಿ ತೆರಳುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಬಳಿಕ ಕಾರಿಗೂ ಡಿಕ್ಕಿ ಹೊಡೆದು ರಸ್ತೆ ಮಧ್ಯದಲ್ಲಿ ಅಡ್ಡಲಾಗಿ ನಿಂತಿದೆ. ಘಟನೆಯಲ್ಲಿ ಬಸ್ಸಿಗೆ ಮತ್ತು ಲಾರಿಗೆ ಹಾನಿಯಾಗಿದೆ.
ಘಟನೆಯಿಂದ 3 ಗಂಟೆಗೂ ಹೆಚ್ಚು ಕಾಲ ಹೆದ್ದಾರಿ ಸಂಪೂರ್ಣವಾಗಿ ಬ್ಲಾಕ್ ಆಗಿದೆ. ಹೆದ್ದಾರಿಯೂದ್ದಕ್ಕೂ ವಾಹನಗಳು ಸಾಲು ಗಟ್ಟಿ ನಿಂತಿತ್ತು. ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿದ್ದಾರೆ.