ಬೆಳ್ತಂಗಡಿ: ಕಿಡಿಗೇಡಿಗಳು ಭಗವಾಧ್ವಜಕಟ್ಟೆಗೆ ಹಾನಿಗೈದು ಕಂಬ ಹಾಗೂ ಭಗವಾಧ್ವಜವನ್ನು ನೆಲಕ್ಕುರುಳಿಸಿದ ಘಟನೆ ಕೊಕ್ಕಡ ಗ್ರಾಮದ ಉಪ್ಪಾರಪಳಿಕೆ ಜಂಕ್ಷನ್ ನಲ್ಲಿ ಎ.17ರ ರಾತ್ರಿ ಸಂಭವಿಸಿದ್ದು, ಈ ಘಟನೆಯನ್ನು ಹಿಂದೂ ಜಾಗರಣ ವೇದಿಕೆ ಉಜಿರೆ ತಾಲೂಕು ಖಂಡಿಸಿದೆ.
ಈ ದುಷ್ಕೃತ್ಯವನ್ನು ಹಿಂದೂ ಜಾಗರಣ ವೇದಿಕೆ ಉಜಿರೆ ತಾಲೂಕು ತೀವ್ರವಾಗಿ ಖಂಡಿಸಿದ್ದು,ಇಂತಹ ಘಟನೆಗಳು ಮರುಕಳಿಸಿದರೆ ನಗರದ ಗಲ್ಲಿಗಲ್ಲಿಗಳಲ್ಲಿ ಭಗವಾಧ್ವಜ ಹಾರಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಕೃತ್ಯವೆಸಗಿದವರ ವಿರುದ್ಧ ಶೀಘ್ರ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಕೊಕ್ಕಡದಿಂದ ಪಟ್ರಮೆಗೆ ತೆರಳುವ ಮಾರ್ಗದಲ್ಲಿರುವ ಉಪ್ಪಾರಪಳಿಕೆ ಎಂಬಲ್ಲಿ ಸ್ಥಳಿಯ ಹಿಂದೂ ಯುವಕರು ಸೇರಿಕೊಂಡು ಭಗವಾಧ್ವಜವನ್ನು ಸ್ಥಾಪಿಸಿದ್ದರು. ಆದರೆ ಶನಿವಾರ ರಾತ್ರಿ ಈ ಭಗವಾಧ್ವಜ ಹಾಗೂ ಅದರ ಕಂಬ ಬುಡ ಸಮೇತ ಮುರಿದು ರಸ್ತೆಗೆ ಬಿದ್ದಿತ್ತು.