ಪುತ್ತೂರು: ಪಿಕಪ್ ವಾಹನವೊಂದು ರಸ್ತೆ ಬದಿ ನಿಲ್ಲಿಸಿದ್ದ ಬೈಕ್, ಜೀಪ್ ಮತ್ತು ಕಾರೊಂದಕ್ಕೆ ಡಿಕ್ಕಿಯಾದ ಘಟನೆ ಕೋಡಿಂಬಾಡಿ ಗ್ರಾಮ ಪಂಚಾಯತ್ ಬಳಿ ನಡೆದಿದೆ.
ಉಪ್ಪಿನಂಗಡಿ ಕಡೆಯಿಂದ ಪುತ್ತೂರು ಕಡೆ ತೆರಳುತ್ತಿದ್ದ ಪಿಕಪ್ ರಸ್ತೆ ಬದಿ ನಿಲ್ಲಿಸಿದ್ದ ಬೈಕ್, ಜೀಪ್ ಮತ್ತು ಕಾರಿಗೆ ಡಿಕ್ಕಿ ಹೊಡೆದಿದ್ದು, ಅಪಘಾತದಿಂದಾಗಿ ನಾಲ್ಕು ವಾಹನಗಳು ಜಖಂಗೊಂಡಿದೆ ಎಂದು ತಿಳಿದು ಬಂದಿದೆ.