ಮಂಗಳೂರು : ಪಂಪ್ ವೆಲ್’ನಲ್ಲಿ ಮತ್ತೊಂದು ಕಾರು ಸೇತುವೆಯಿಂದ ಕೆಳಕ್ಕೆ ಉರುಳಿ ಬಿದ್ದಿದ್ದೂ ಕಾರಿನಲ್ಲಿದ್ದ ಪ್ರಯಾಣಿಕರು ಯಾವುದೇ ಹೆಚ್ಚಿನ ಅಪಾಯಗಳಿಲ್ಲದೆ ಪಾರಾಗಿದ್ದಾರೆ. ಪಂಪ್ ವೆಲ್ ಮೇಲ್ಸೇತುವೆ ಮೇಲೆ ಸಾಗುತ್ತಿದ್ದ ಮಾರುತಿ ಸ್ವಿಪ್ಟ್ ಕಾರು ಮೇಲ್ಸೇತುವೆಯಿಂದ ಕೆಳಕ್ಕೆ ಉರುಳಿ ಬಿದ್ದಿದೆ. ಬೀಳುವಾಗ ಕಾರು ಉಲ್ಟಾ ಆಗಿ ಬಿದ್ದಿದ್ದು ಆದರ ನಾಲ್ಕು ಚಕ್ರಗಳು ಆಕಾಶಮುಖಿಯಾಗಿದ್ದವು .
ನಂತೂರು ಕಡೆಯಿಂದ ಪಂಪ್ ವೆಲ್ ಕಡೆಗೆ ಚಲಿಸುತ್ತಿದ್ದ ಸ್ವಿಪ್ಟ್ ಡಿಸೈರ್ ಕಾರು ಚಾಲಕನ ನಿಯಂತ್ರಣ ತಪ್ಪಿ ಕೆಳಕ್ಕೆ ಹಾರಿದೆ ಕಾರಿನಲ್ಲಿದ್ದವರು ತರಚುಗಾಯಗಳೊಂದಿಗೆ ಪಾರಾಗಿದ್ದಾರೆ. ಘಟನೆಗೆ ವೇಗದ ಚಾಲನೆಯೇ ಕಾರಣ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.