ಮಂಗಳೂರು: ಮಾರುತಿ ಓಮ್ನಿ ಕಾರೊಂದು ಎಕ್ಸ್ ಪ್ರೆಸ್ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ ಘಟನೆ ಮಂಗಳೂರು ಹಳೆಯಂಗಡಿಯ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿನ್ನೆ ತಡ ರಾತ್ರಿ ನಡೆದಿದೆ.
ಪಾವಂಜೆಯ ಮುಕ್ಕ ಪಡ್ರೆ ನಿವಾಸಿಗಳಾದ ಭುಜಂಗ (62) ಹಾಗೂ ವಸಂತ್ (55) ಭೀಕರ ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳಾಗಿದ್ದಾರೆ.
ಕಾರು ಚಾಲಕ ಬಾಲಕೃಷ್ಣ ಎಂಬವರು ಸಹ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಓಮ್ನಿ ಕಾರು ಹಳೆಯಂಗಡಿ ಒಳ ರಸ್ತೆಯಿಂದ ಪಾವಂಜೆ ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕಿಸುವಾಗ ಮಂಗಳೂರಿನಿಂದ ಬರುತ್ತಿದ್ದ ಎಕ್ಸ್‌ಪ್ರೆಸ್ ಬಸ್ಸಿಗೆ ನೇರವಾಗಿ ಡಿಕ್ಕಿ ಹೊಡೆದ ಪರಿಣಾಮ ಅವಘಡ ನಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.
ಮಂಗಳೂರು ಉತ್ತರ ವಲಯದ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.