ಮಂಗಳೂರು: ಕೆಲ ತಿಂಗಳುಗಳಿಂದ ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಆರಂಭವಾದ ಹಿಜಾಬ್ ವಿವಾದ ನ್ಯಾಯಾಲಯದ ತೀರ್ಪಿನ ಬಳಿಕ ಕೆಲವು ಕಡೆಗಳಲ್ಲಿ ತಣ್ಣಗಾಗಿತ್ತು. ಸದ್ಯ ದಿತ್ವೀಯ ಪಿಯುಸಿ ಪರೀಕ್ಷೆ ನಡೆಯುತ್ತಿದ್ದೂ, ಮಂಗಳೂರಿನ ಸರಕಾರಿ ಕಾಲೇಜ್ ವೊಂದಕ್ಕೆ ಮೂವರು ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಕೊಂಡು ಆಗಮಿಸಿದ್ದಾರೆ.
ಮಂಗಳೂರಿನ ರಥಬೀದಿಯ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಕಾಲೇಜ್ ಗೇಟ್ ಅವರಣದಲ್ಲಿ ಭದ್ರತೆಗೆ ನಿಯೋಜಿಸಲ್ಪಟ್ಟ ಪೊಲೀಸರು ಅವರನ್ನು ಗೇಟ್ ಬಳಿ ತಡೆದು , ಕಾಲೇಜ್ ಅವರಣ ಪ್ರವೇಶಿಸದಂತೆ ತಡೆದಿದ್ದಾರೆ. ಬಳಿಕ ಪೊಲೀಸರು ಹಿಜಾಬ್ ತೆಗೆದು ಬಂದರೇ ಮಾತ್ರ ಕಾಲೇಜ್ ಪ್ರವೇಶಿಸಲು ಅವಕಾಶ ನೀಡುವುದಾಗಿ ತಿಳಿಸಿದ್ದಾರೆ.
ಪೊಲೀಸರ ಸೂಚನೆಯಂತೆ ಹಿಜಾಬ್ ಧಾರಿಣಿ ವಿದ್ಯಾರ್ಥಿನಿಯರು ಹಿಜಾಬ್ ತೆಗೆದು ಬರಲು ಒಪ್ಪಿಕೊಂಡಿದ್ದು, ಬಳಿಕ ಮೂವರು ವಿದ್ಯಾರ್ಥಿನಿಯರು ಹಿಜಾಬ್ ತೆಗೆದಿಟ್ಟು ಬಂದಿದ್ದು ಅವರನ್ನು ಪರೀಕ್ಷಾ ಕೇಂದ್ರದ ಒಳಗೆಹೋಗಲು ಪೊಲೀಸರು ಅವಕಾಶ ಕಲ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.